ಲತಾ ಮಂಗೇಶ್ಕರ್ಗೆ ಮುಂದಿವರೆದ ಚಿಕಿತ್ಸೆ; ನ್ಯುಮೋನಿಯಾದಿಂದ ಬಳಲಿಕೆ
ಮುಂಬೈ: ಕೊವಿಡ್ ಪಾಸಿಟಿವ್ ಆಗಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿರವಾಗಿದೆ. ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನೂ 10-12 ದಿನ ವೈದ್ಯರ ನಿಗಾದಲ್ಲಿರಲಿದ್ದಾರೆ ಎಂದು ತಿಳಿದುಬಂದಿದೆ.
ಕೊರೊನಾ ಹಿನ್ನೆಲೆಯಲ್ಲಿ ಲತಾ ಮಂಗೇಶ್ಕರ್ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲತಾ ಅವರು ಕೊರೊನಾ ಅಲ್ಲದೆ, ನ್ಯುಮೋನನಿಯಾದಿಂದಲೂ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯ ಪ್ರತೀತ್ ಸಂಧಾನಿ ಹೇಳಿದ್ದಾರೆ.