Districts

ರಾಮನಗರ ಕಾಂಗ್ರೆಸ್‌ ಕಚೇರಿಯಲ್ಲಿ ಹೈಡ್ರಾಮಾ; ರಾಹುಲ್‌ ಜೊತೆ ಡಿಕೆಶಿ ಮಾತುಕತೆ

ರಾಮನಗರ: ಕೋರ್ಟ್‌ ಖಡಕ್‌ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೇಕೆದಾಟು ಪಾದಯಾತ್ರೆ ತಕ್ಷಣದಿಂದಲೇ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ. ಆದರೆ, ಕಾಂಗ್ರೆಸ್‌ ನಾಯಕರು ಮಾತ್ರ ಪಾದಯಾತ್ರೆ ನಡೆಸಿಯೇ ತೀರುತ್ತೇವೆ ಎಂದು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಹೈಡ್ರಾಮಾ ನಡೆಯುತ್ತಿದೆ.

ಈಗಾಗಲೇ ಪೊಲೀಸರು, ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ನೊಟಿಸ್‌ ಅಂಟಿಸಿದ್ದಾರೆ. ಇದೀಗ ರಾಮನಗರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಪಾದಯಾತ್ರೆ ಮುಂದುವರೆಯದಂತೆ ನಿಲ್ಲಿಸಲು ಪೊಲೀಸರು ಸನ್ನದ್ಧರಾಗಿದ್ದಾರೆ. ಈ ನಡುವೆ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಾಯಕರು ಚರ್ಚೆ ನಡೆಸುತ್ತಿದ್ದಾರೆ.

ಇನ್ನು ಪೊಲೀಸರು ಕೂಡಾ ಕಾಂಗ್ರೆಸ್‌ ನಾಯಕರ ಮನವೊಲಿಸಲು ಪ್ರಯತ್ನ ಮಾಡುತ್ತಿದ್ದಾರೆ. ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗಿರೀಶ್‌ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿದೆ. ಪಾದಯಾತ್ರೆಯನ್ನು ಕೂಡಲೇ ನಿಲ್ಲಿಸಬೇಕು.ಇಲ್ಲದಿದ್ದರೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮುಂದೇನು ಮಾಡಬೇಕು ಎಂಬುದರ ಬಗ್ಗೆ ಯೋಚನೆ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರು ರಾಹುಲ್‌ ಗಾಂಧಿಯವರಿಗೆ ಕರೆ ಮಾಡಿ, ರಾಜ್ಯದ ವಿದ್ಯಮಾನವನ್ನು ವಿವರಿಸಿದ್ದಾರೆ. ಹೈಕಮಾಂಡ್‌ ಸೂಚನೆಯಂತೆ ರಾಜ್ಯ ಕಾಂಗ್ರೆಸ್‌ ನಾಯಕರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

Share Post