Health

ರಾಜ್ಯದಲ್ಲಿ ಇಂದೂ ಕೊರೊನಾ ಸ್ಫೋಟ; 25005 ಪ್ರಕರಣ ಪತ್ತೆ..!

ಬೆಂಗಳೂರು: ರಾಜ್ಯದಲ್ಲಿ ಇವತ್ತೂ ಕೂಡಾ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ. ಇಂದು ಒಂದೇ ದಿನ 25005 ಮಂದಿ ಕೊರೊನಾ ಸೋಂಕು ದೃಢಪಟ್ಟಿದೆ. ಇದ್ರಲ್ಲಿ ಬೆಂಗಳೂರಿನದ್ದೇ ಸಿಂಹಪಾಲು. ಬೆಂಗಳೂರಿನಲ್ಲಿ 18,374 ಮಂದಿಗೆ ಕೊರೊನಾ ಸೋಂಕು ತಗುಲಿದೆ.

ಇನ್ನು ಇಂದು ಕರ್ನಾಟಕದಲ್ಲಿ ಒಟ್ಟು ಎಂಟು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.  ರಾಜ್ಯದಲ್ಲಿ ಈಗ 1,15733 ಸಕ್ರಿಯ ಪ್ರಕರಣಗಳಿದ್ದು, ಬಹುತೇಕ ಹೋಮ್‌ ಐಸೋಲೇಷನ್‌ನಲ್ಲಿದ್ದಾರೆ. ಬಹುತೇಕರಿಗೆ ಸೋಂಕಿನ ಯಾವುದೇ ಲಕ್ಷಣಗಳಿಲ್ಲ.

ಇನ್ನು ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆಯೂ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಕೆಲವರಿಗೆ ಜ್ವರ, ಕೆಮ್ಮು, ಗಂಟಲು ಕಿರಿಕಿರಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಂತಹವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

Share Post