Politics

UP Elections : ಯೋಗಿ ಆದಿತ್ಯನಾಥ್‌ ಅಯೋಧ್ಯೆಯಿಂದ ಸ್ಪರ್ಧಿಸಲ್ಲ

ನವದೆಹಲಿ : ಪಂಚರಾಜ್ಯಗಳಲ್ಲಿ ಈಗಾಗಲೇ ಎಲೆಕ್ಷನ್‌ ಕಾವು ಹೊತ್ತಿಕೊಂಡಿದೆ. ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್‌ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.  ಸಿಎಂ ಯೋಗಿ ಆದಿತ್ಯನಾಥ್‌ ಅವರು ಅಯೋಧ್ಯಯಿಂದ ಸ್ಪರ್ಧಿಸುವುದಿಲ್ಲ. ಬದಲಿಗೆ ಅವರು ಗೋರಖ್‌ಪುರ್‌ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಿಸಿದೆ.

ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ಧರ್ಮೇಂದ್ರ ಪ್ರದಾನ್‌ ಅವರು ಮೊದಲ ಹಂತದ 57 ಹಾಗೂ ಎರಡನೇ ಹಂತದ 38 ಸೀಟುಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರುಗಳನ್ನು ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಈ ಹಿಂದೆ ಯೋಗಿ ಅವರನ್ನು ಅಯೋಧ್ಯೆಯಿಂದ ಕಣಕ್ಕಿಳಿಸುವುದರ ಬಗ್ಗೆ ಮಾತುಗಳು ಕೇಳಿ ಬಂದಿದ್ದವು, ಆದರೆ ಸತತ 5 ಬಾರಿ ಅವರು ಗೋರಖ್‌ಪುರ್‌ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಕಾರಣ ಅಲ್ಲಿಂದಲೇ ಕಣಕ್ಕಿಳಿಸಲು ಬಿಜೆಪಿ ತೀರ್ಮಾನಿಸಿದೆ.

ಉತ್ತರ ಪ್ರದೇಶದಲ್ಲಿ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಫೆಬ್ರುವರಿ 10ರಿಂದ ಮಾರ್ಚ್ 7ರ ವರೆಗೆ ಚುನಾವಣೆ ನಡೆಯಲಿದೆ.

Share Post