National

ಒತ್ತಾಯದಿಂದ ಯಾರಿಗೂ ಲಸಿಕೆ ಹಾಕಲ್ಲ : ಸುಪ್ರೀಂಗೆ ಕೇಂದ್ರ ಸ್ಪಷ್ಟನೆ

ನವದೆಹಲಿ : ಲಸಿಕೆಯನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡುತ್ತಿದೆ ಮತ್ತು ಮನೆ ಮನೆಗೆ ತೆರಳಿ ಲಸಿಕೆ ಹಾಕಿಸಿಕೊಳ್ಳುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದು ಇವಾರ ಫೌಂಡೇಶನ್‌ ಎಂಬ ಎನ್‌ಜಿಒ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಇದಕ್ಕೆ ಉತ್ತರ ನೀಡಿರುವ ಕೇಂದ್ರ ಸರ್ಕಾರ, ದೇಶದಲ್ಲಿ ನಾವು ಯಾರಿಗೂ ಒತ್ತಾಯ ಮಾಡಿ ಲಸಿಕ ನೀಡ್ತಿಲ್ಲ. ಆ ರೀತಿಯ ಯಾವುದೇ ಸೂಚನೆಯನ್ನು ಕೇಂದ್ರ ಸರ್ಕಾರ ಅಥವ ಆರೋಗ್ಯ ಸಚಿವಾಲಯ ಹೊರಡಿಸಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ.

ಲಸಿಕೆ ನೀಡುವುದನ್ನಾಗಲಿ ಅಥವ ಲಸಿಕೆಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸುವಂತಹ ಕ್ರಮವನ್ನಾಗಲಿ ಸರ್ಕಾರ ಜಾರಿಗೆ ತಂದಿಲ್ಲ ಎಂದು ಕೇಂದ್ರ ತಿಳಿಸಿದೆ.

ಜನರ ಆರೋಗ್ಯ ಹಿತಾಸಕ್ತಿಯಿಂದ ಮತ್ತು ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಆರೋಗ್ಯ ಸಚಿವಾಲಯ ಅಭಿಯಾನ ಕೈಗೊಂಡಿದೆ ಆದರೆ ಒತ್ತಾಯದಿಂದ ಯಾರ ಮೇಲೂ ಹೇರಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದೆ.

Share Post