ಆಂಧ್ರ ವಿಪಕ್ಷ ನಾಯಕ ಚಂದ್ರಬಾಬು ನಾಯ್ಡುಗೆ ಕೊರೊನಾ ದೃಢ
ಹೈದರಾಬಾದ್ : ಆಂಧ್ರಪ್ರದೇಶದ ವಿರೋಧ ಪಕ್ಷದ ನಾಯಕ ಎನ್. ಚಂದ್ರಬಾಬು ನಾಯ್ಡು ಅವರಿಗೆ ಕೊರೊನಾ ಸೋಂಕು ತಗುಲಿದೆ. ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಹಾಗೂ ವಿಪಕ್ಷ ನಾಯಕ ಚಂದ್ರಬಾಬು ನಾಯ್ಡು ಅವರು ಟ್ವೀಟ್ ಮೂಲಕ ತಮ್ಮ ಕೊರೊನಾ ಸೋಂಕಿನ ಬಗ್ಗೆ ತಿಳಿಸಿದ್ದಾರೆ.
ಚಂದ್ರ ಬಾಬು ನಾಯ್ಡು ಅವರು ಟ್ವೀಟ್‌ನಲ್ಲಿ ನಾನು ಕೋವಿಡ್-19 ಟೆಸ್ಟ್ ಮಾಡಿಸಿಕೊಂಡಿದ್ದು, ಈ ವೇಳೆ ನನಗೆ ಕೊರೊನಾ ಪಾಸಿಟಿವ್ ಬಂದಿದೆ. ನನಗೆ ಸೌಮ್ಯ ರೋಗಲಕ್ಷಣಗಳಿದ್ದು, ಇದೀಗ ಮನೆಯಲ್ಲಿಯೇ ಕ್ವಾರಂಟೈನ್‍ನಲ್ಲಿದ್ದೇನೆ ಮತ್ತು ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇನೆ. ನನ್ನ ಜೊತೆ ಸಂಪರ್ಕಕ್ಕೆ ಬಂದಿದ್ದ ಎಲ್ಲರೂ ಆದಷ್ಟು ಬೇಗ ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ವಿನಂತಿಸುತ್ತೇನೆ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಮತ್ತು ನಿಮ್ಮ ಬಗ್ಗೆ ಕಾಳಜಿ ವಹಿಸಿ ಎಂದು ಬರೆದುಕೊಂಡಿದ್ದಾರೆ.
I've tested positive for COVID with mild symptoms. I have quarantined myself at home and taking all the necessary precautions.
I would request those who came in contact with me to get themselves tested at the earliest. Please be safe and take care.
— N Chandrababu Naidu (@ncbn) January 18, 2022