National

ಸ್ತಬ್ಧಚಿತ್ರ ಮರುಪರಿಶೀಲಿಸೋ ಪ್ರಶ್ನೆಯೇ ಇಲ್ಲ ಎಂದ ಕೇಂದ್ರ

ನವದೆಹಲಿ : ಕೇರಳ ಸೇರಿದಂತೆ ಮೂರು ರಾಜ್ಯಗಳ ಸ್ತಬ್ಧಚಿತ್ರಗಳನ್ನು ತಿರಸ್ಕರಿಸಿದ್ದ ಕೇಂದ್ರ ಸರ್ಕಾರಕ್ಕೆ ಅದಕ್ಕೆ ತಾನು ಬದ್ಧವಾಗಿದೆ ಎಂದು ಹೇಳಿದೆ.  ಗಣರಾಜ್ಯೋತ್ಸವದ ಪರೇಡ್​ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳ ಸ್ತಬ್ಧಚಿತ್ರಗಳನ್ನು ತಿರಸ್ಕರಿಸಲಾಗಿದ್ದು, ಈ ನಿರ್ಧಾರವನ್ನು ಮತ್ತೆ ಪರಿಶೀಲನೆ ಮಾಡಲು ಸಾಧ್ಯವಿಲ್ಲ ಎಂದು ರಕ್ಷಣಾ ಇಲಾಖೆ ಹೇಳಿದೆ.

   ಕೇರಳ ಸರ್ಕಾರ ಈ ಬಾರಿ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಕಳುಹಿಸಿತ್ತು. ಇದನ್ನು ಕೇಂದ್ರ ಸರ್ಕಾರ ನಿರಾಕರಿಸಿತ್ತು. ಇದಕ್ಕೆ ಎಲ್ಲೆಡೆ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಈ ಬೆನ್ನಲ್ಲೇ ತಮಿಳುನಾಡು ಹಾಗೂ ಪಶ್ಚಿಮ ಬಂಗಾಳ ಸರ್ಕಾರಗಳು ಕಳುಹಿಸಿದ್ದ ಟ್ಯಾಬ್ಲೊಗಳನ್ನೂ ನಿರಾಕರಿಸಲಾಗಿತ್ತು. ಹೀಗಾಗಿ ಮರು ಪರಿಶೀಲಿಸುವಂತೆ ಎರಡೂ ಸರ್ಕಾರಗಳು ಕೇಂದ್ರವನ್ನು ಕೋರಿದ್ದವು. ಆದ್ರೆ ಇದಕ್ಕೆ ಕೇಂದ್ರ ಒಪ್ಪಿಗೆ ನೀಡಿಲ್ಲ.

      ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡು ರಾಜ್ಯಗಳು ರೂಪಿಸಿದ ಟ್ಯಾಬ್ಲೋಗಳು ನಿಯಮಾನುಸಾರವಾಗಿಲ್ಲ. ಇದರಿಂದಾಗಿ ಈ ರಾಜ್ಯಗಳ ಮನವಿ ಮರು ಪರಿಶೀಲಿಸಲಾಗುವುದಿಲ್ಲ ಎಂದು ರಕ್ಷಣಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

Share Post