ನಾಮಫಲಕದ ಶೇ.60 ಭಾಗ ಕನ್ನಡದಲ್ಲೇ ಇರಬೇಕು; ಸರ್ಕಾರದಿಂದ ಡೆಡ್ ಲೈನ್
ಬೆಂಗಳೂರು; ಕನ್ನಡದಲ್ಲೇ ನಾಮಫಲಕ ಅಳವಡಿಸಬೇಕೆಂದು ಆಗ್ರಹಿಸಿ ನಿನ್ನೆ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆದಿತ್ತು. ಈ ವೇಳೆ ಕರವೇ ನಾರಾಯಣ ಗೌಡ ಸೇರಿ ಹಲವರನ್ನು ಬಂಧಿಸಲಾಗಿದೆ. ಇದರ ವಿರುದ್ಧ ಇತರೆ ಕನ್ನಡ ಸಂಘಟನೆ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಈ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ.
ಸಿಎಂ ಸಿದ್ದರಾಮಯ್ಯ ಇಂದು ದಿಢೀರ್ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದರು. ಬಳಿಕ ಮಾತನಾಡಿದ ಅವರು, ಶೇ.60ರಷ್ಟು ಕನ್ನಡದಲ್ಲಿಯೇ ಬೋರ್ಡ್ ಇರಬೇಕು. 2024ರ ಫೆಬ್ರುವರಿ 28ರೊಳಗೆ ಅಂಗಡಿಗಳ ಬೋರ್ಡ್ ಚೇಂಜ್ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು ಎಂದು ಆದೇಶ ಹೊರಡಿಸಿದರು.