BengaluruPolitics

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಸಿ.ಟಿ.ರವಿಗೆ ಕೊಕ್

ನವದೆಹಲಿ; ಬಿಜೆಪಿ ಪಕ್ಷ ರಾಷ್ಟ್ರೀಯ ಕಾರ್ಯಕಾರಿಣಿ ಸಮಿಯಿಯನ್ನು ಪುನಾರಚನೆ ಮಾಡಿದೆ. ಇದರಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡಲಾಗಿದೆ.

ಸಂಘಟನಾ ಕಾರ್ಯದರ್ಶಿಯಾಗಿ ಬಿ.ಎಲ್.ಸಂತೋಷ್ ಅವರನ್ನು ಮುಂದುವರೆಲಾಗಿದೆ. ಇನ್ನು ಶೀಘ್ರದಲ್ಲೇ ತೆಲಂಗಾಣ ಚುನಾವಣೆ ಇದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ನಾಯಕ ಬಂಡಿ ಸಂಜಯ್ ಗೆ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ನೀಡಲಾಗಿದೆ.

ಸಿ.ಟಿ.ರವಿಯವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ‌‌ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

Share Post