ವರ್ತೂರ್ ಸಂತೋಷ್ ಗೆ ಜಾಮೀನು ನೀಡಿದ ಕೋರ್ಟ್
ಬೆಂಗಳೂರು; ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಕ್ಕಾಗಿ ಬಂಧಿತರಾಗಿದ್ದ ವರ್ತೂರ್ ಸಂತೋಷ್ ಗೆ ಷರತ್ತುಬದ್ಧ ಜಾಮೀನು ಸಿಕ್ಕಿದೆ. ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯದಿಂದ ಜಾಮೀನು ನೀಡಲಾಗಿದೆ.
4 ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ ಸಂತೋಷ್ ಗೆ ಷರತ್ತು ಹಾಕಲಾಗಿದೆ. ಇಂದು ಸಂಜೆ ವೇಳೆಗೆ ವರ್ತೂರು ಸಂತೋಷ್ ಬಿಡುಗಡೆ ಆಗಲಿದ್ದಾರೆ. ಮತ್ತೆ ಅವರು ಬಿಗ್ ಬಾಸ್ನಲ್ಲಿ ಸ್ಪರ್ಧಿಸುತ್ತಾರಾ ಎಂಬ ಕುತೂಹಲ ಶುರುವಾಗಿದೆ.