ಇಂದು ಸುರ್ಜೇವಾಲಾ ಆಗಮನ; ನಿಗಮ-ಮಂಡಳಿಗೆ ಆಯ್ಕೆಗೆ ಕಸರತ್ತು
ಬೆಂಗಳೂರು; ನಿಗಮ-ಮಂಡಳಿಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಮಹತ್ವದ ಚರ್ಚೆ ನಡೆಯಲಿದೆ. ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಸಭೆ ನಡೆಸಲಿರುವ ರಣದೀಪ್ ಸುರ್ಜೇವಾಲಾ ಅವರು, ಯಾರ್ಯಾರಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ ನೀಡಬೇಕು ಎಂಬುದರ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ.
ಲೋಕಸಭಾ ಚುನಾವಣೆ ಹತ್ತಿರದಲ್ಲಿರುವ ಹಿನ್ನೆಲೆಯಲ್ಲಿ ನಿಗಮ-ಮಂಡಳಿಗಳಿಗೆ ನೇಮಕ ಮಾಡಿದರೆ ಒಳ್ಳೆಯದು ಎಂಬ ಮಾತಿದೆ. ಈ ಕಾರಣಕ್ಕಾಗಿಯೇ ಈ ಹಿಂದೆ ದೆಹಲಿಯಲ್ಲಿ ಮೀಟಿಂಗ್ ನಡೆದಿತ್ತು. ಆದ್ರೆ ಸಿಎಂ ಸಿದ್ದರಾಮಯ್ಯ ಅವರು 25 ಶಾಸಕರಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ ನೀಡಬೇಕೆಂದು ಕೇಳಿದ್ದರು. ಆದ್ರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚುನಾವಣೆ ಸಮಯದಲ್ಲಿ ನಾವು ಮಾತು ಕೊಟ್ಟಿದ್ದೇವೆ. ಪಕ್ಷಕ್ಕಾಗಿ ದುಡಿದ ಹಾಗೂ ಟಿಕೆಟ್ ಕೈತಪ್ಪಿದವರಿಗೆ ನಿಗಮ-ಮಂಡಳಿಗಳಲ್ಲಿ ಹೆಚ್ಚಿನ ಸ್ಥಾನ ನೀಡಬೇಕು ಎಂದಿದ್ದರು. ಈ ಕಾರಣಕ್ಕಾಗಿ ನೇಮಕ ನೆನೆಗುದಿಗೆ ಬಿದ್ದಿತ್ತು.
ಇದೀಗ ಮತ್ತೆ ಸುರ್ಜೇವಾಲಾ ಅವರು ಸಿದ್ದರಾಮಯ್ಯ ಅವರ ಡಿ.ಕೆ.ಶಿವಕುಮಾರ್ ಜೊತೆ ಮಾತುಕತೆಗೆ ಬರುತ್ತಿದ್ದಾರೆ. ನಾಳೆ ಬಹುತೇಕ ಲಿಸ್ಟ್ ಫೈನಲ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ನಾಳಿನ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.