BengaluruHealth

ಟ್ರಾಫಿಕ್‌ನಲ್ಲಿ ಸಿಲುಕಿದ ಆ್ಯಂಬುಲೆನ್ಸ್; ಒಂದೂವರೆ ವರ್ಷದ ಮಗು ಸಾವು

ಬೆಂಗಳೂರು: ಆ್ಯಂಬುಲೆನ್ಸ್ ಟ್ರಾಫಿಕ್ ನಲ್ಲಿ ಸಿಲುಕಿ ಒಂದುವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಫೆ.2 ರಂದು ಗುರುವಾರ ಬೆಂಗಳೂರಿನ ಗೊರಗುಂಟೆಪಾಳ್ಯ ಬಳಿ ಘಟನೆ ನಡೆದಿದ್ದು, ತಿಪಟೂರು ಮೂಲದ ಅಹಮ್ಮದ್ , ರುಕ್ಸಾನ ದಂಪತಿಯ ಒಂದುವರೆ ವರ್ಷದ ಮಗು ಮೃತಪಟ್ಟಿದೆ.

ಫೆ.2 ರಂದು ತಿಪಟೂರು ತಾಲ್ಲೂಕಿನ ಕೈಮರಾ ಬಳಿ ಬುಲೆರೋ ವಾಹನ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿತ್ತು . ಘಟನೆಯಲ್ಲಿ ಮೃತ ಬಾಲಕಿ, ತಂದೆ ಅಹಮ್ಮದ್ , ತಾಯಿ ರುಕ್ಸಾನಾ ಗಾಯಗೊಂಡಿದ್ದರು. ಕೂಡಲೇ ಅವರನ್ನು ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು . ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಹಾಸನದ ಹಿಮ್ಸ್‌ಗೆ ಕರೆದುಕೊಂಡು ಹೋಗಲಾಗಿತ್ತು . ಬಳಿಕ ಹಿಮ್ಸ್ ಆಸ್ಪತ್ರೆಯಿಂದ ಆ್ಯಂಬುಲೆನ್ಸ್ ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿತ್ತು

ಹಾಸನದಿಂದ ಆಂಬುಲೆನ್ಸ್ ಮೂಲಕ ಕೇವಲ ಒಂದು ಗಂಟೆಯಲ್ಲೇ ಝೀರೋ ಟ್ರಾಫಿಕ್‌ನಲ್ಲಿ ಮಗು ನೆಲಮಂಗಲ ತಲುಪಿತ್ತು . ಆದರೆ ನೆಲಮಂಗಲದಿಂದ ಗೊರಗುಂಟೆಪಾಳ್ಯದ ನಡುವಿನ ಟ್ರಾಫಿಕ್‌ನಲ್ಲಿ ಆ್ಯಂಬುಲೆನ್ಸ್ ಸಿಲುಕಿಕೊಂಡು ಬರೋಬ್ಬರಿ 20 ನಿಮಿಷಗಳ ಕಾಲ ಟ್ರಾಫಿಕ್‌ನಲ್ಲಿ ಆ್ಯಂಬುಲೆನ್ಸ್ ಸಿಲುಕಿಕೊಂಡಿದೆ. ಟ್ರಾಫಿಕ್ ನಲ್ಲಿಯೇ ಆ್ಯಂಬುಲೆನ್ಸ್ ಸಿಲುಕಿದರಿಂದ ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸದ್ದಿಂದ ಮಗುವಿಗೆ ಚಿಕಿತ್ಸೆ ಸಿಗದೇ ಸಾವನ್ನಪ್ಪಿದೆ ಎನ್ನಲಾಗಿದೆ.

Share Post