ತಹಸೀಲ್ದಾರ್ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ
ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತಾತ್ಮಕ ಹಿತದೃಷ್ಟಿಯಿಂದ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಪ್ರಾರಂಭವಾಗಿದೆ. ಈಗಾಗಲೇ ಐಎಎಸ್, ಐಪಿಎಸ್, ಡಿವೈಎಸ್ಪಿ ಸೇರಿದಂತೆ ವಿವಿಧ ಶ್ರೇಣಿಯ ಅಧಿಕಾರಿಗಳನ್ನು ಹಂತ ಹಂತವಾಗಿ ವರ್ಗಾವಣೆ ಮಾಡಲಾಗಿದೆ. ಇದೀಗ ತಹಶಿಲ್ದಾರ್ ಗಳನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಕರ್ನಾಟಕ ವಿಧಾನಸಭಾ ಚುನಾವಣೆ -2023ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯ ಅನ್ವಯ, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಇದೀಗ ಕಂದಾಯ ಇಲಾಖೆಯ 76 ತಹಶೀಲ್ದಾರ್ಗಳನ್ನು ಒಂದೇ ದಿನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ರವಾನಿಸಿದೆ.
ರಾಜ್ಯದ ಕಂದಾಯ ಇಲಾಖೆಯ 76 ತಹಶೀಲ್ದಾರ್ಗಳು ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ಸೂಚಿಸಿದ ಸ್ಥಳದಲ್ಲಿ ತಕ್ಷಣವೇ ಕರ್ತವ್ಯಕ್ಕೆ ಹಾಜರಾಗುವಂತೆ ವರ್ಗಾಯಿಸಿ ಆದೇಶಿಸಿದೆ.