Bengaluru

ತಿಂಗಳ ಅಂತ್ಯದವರೆಗೂ ನಗರದಲ್ಲಿ ವಿಪರೀತ ಚಳಿ

ಬೆಂಗಳೂರು: ನಗರದಲ್ಲಿ ಮಳೆ ಕಡಿಮೆಯಾಗಿದೆ. ಹೀಗಾಗಿ ಶೀತದ ಗಾಳಿ ವಿಪರೀತವಾಗಿದ್ದು, ಈ ತಿಂಗಳ ಅಂತ್ಯದವರೆಗೂ ಚಳಿ ಮುಂದುವರೆಯಲಿದೆ. ಅಷ್ಟೇ ಅಲ್ಲದೇ
ರಾಜ್ಯದ ಹಲವು ಭಾಗಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ವಿಜಯಪುರ, ಬಾಗಲಕೋಟೆ, ಕಲಬುರ್ಗಿ, ಧಾರವಾಡ, ಹುಬ್ಬಳ್ಳಿ ಮುಂತಾದ ಜಿಲ್ಲೆಗಳಲ್ಲಿ ಈಗಾಗಲೇ ಚಳಿ ಹೆಚ್ಚಾಗಿ ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ದಾಖಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಚಳಿಯು ಸಹಜ ತಾಪಮಾನಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ.
ಕರ್ನಾಟಕದಾದ್ಯಂತ ಹೆಚ್ಚಿನ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಡಿಸೆಂಬರ್ 29, 1883ರಂದು ಅತ್ಯಂತ ಕಡಿಮೆ ಕನಿಷ್ಠ 8.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನಲ್ಲಿ 2011ರಲ್ಲಿ 12.8 ಡಿಗ್ರಿ, ಡಿಸೆಂಬರ್ 11, 2016ರಂದು 12 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಡಿಸೆಂಬರ್ 22, 2020ರಂದು ಬೆಂಗಳೂರಿನಲ್ಲಿ ಕನಿಷ್ಠ 14.20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲೆ ಕಂಡಿದೆ.

Share Post