BengaluruPolitics

ಧ್ಯಾನವೂ ಸಿದ್ದರಾಮಯ್ಯಗೆ ರಾಜಕೀಯ ಅಜೆಂಡಾ; ಸಚಿವ ಬಿ.ಸಿ.ನಾಗೇಶ್‌

ಬೆಂಗಳೂರು: ಶಾಲಾ, ಕಾಲೇಜುಗಳಲ್ಲಿ ಪ್ರತಿನಿತ್ಯ 10 ನಿಮಿಷ ಧ್ಯಾನ ಮಾಡುವ ತೀರ್ಮಾನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಸಚಿವ ಬಿ.ಸಿ.ನಾಗೇಶ್‌, ಧ್ಯಾನವನ್ನೂ “ರಾಜಕೀಯ ಅಜೆಂಡಾ, ಗಿಮಿಕ್” ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯಮ ಎಂದಿದ್ದಾರೆ.

ಟ್ವೀಟ್‌ ವಿವರ ಇಲ್ಲಿದೆ

ಟ್ವೀಟ್‌-೧
ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ.
ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ?

ಟ್ವೀಟ್‌-೨
ಧ್ಯಾನವನ್ನೂ “ರಾಜಕೀಯ ಅಜೆಂಡಾ, ಗಿಮಿಕ್” ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯ. ಈ ಮೊದಲು @INCKarnataka ನಾಯಕರು ಯೋಗಾಚರಣೆಗೆ ವಿರೋಧಿಸಿದ್ದರು. ಈಗ ಧ್ಯಾನಕ್ಕೆ ಅಡ್ಡಿಪಡಿಸಲು ಯತ್ನಿಸುತ್ತಿದ್ದಾರೆ. @siddaramaiah ಅವರೇ, ಧ್ಯಾನದಿಂದ ಯಾವ ಕೆಡುಕು ಇದೆ ಎಂಬುದನ್ನು ವಿವರಿಸುವಿರಾ?‌

Share Post