ನಾಳೆ ಜೆಪಿ ನಡ್ಡಾ ರಾಜ್ಯಕ್ಕೆ ಆಗಮನ; ಎಲ್ಲೆಲ್ಲಿ ಭೇಟಿ?
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಬಳಿಕ ಇದೀಗ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಜ.5 ಮತ್ತು 6ರಂದು ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಕಾರ್ಯಕರ್ತರ ಸಭೆಗಳಲ್ಲಿ ಪಾಲ್ಗೊಳ್ಳಲ್ಲಿದ್ದಾರೆ.
ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ಬಿಜೆಪಿ ಹೈಕಮಾಂಡ್ ನಾಯಕರ ರಾಜ್ಯ ಕಡೆ ಮುಖ ಮಾಡುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸದ ಬೆನ್ನಲ್ಲೇ ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕರ್ನಾಟಕ ಪ್ರವಾಸ ನಡೆಸಲಿದ್ದಾರೆ.
ಜನವರಿ 5 ಮತ್ತು 6 ರಂದು ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಎರಡು ದಿನಗಳ ಪ್ರವಾಸ ನಡೆಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಸಿದ್ಧಗಂಗಾ ಮಠ, ಸಿರಿಗೆರೆ ಮಠ, ತರಳಬಾಳು ಮಠ, ಹರಿಹರ ಮಠ, ಮಾದಾರ ಚನ್ನಯ್ಯ ಮಠ ಮೊದಲಾದ ವಿವಿಧ ಮಠಗಳಿಗೆ ಭೇಟಿ ನೀಡಲಿದ್ದಾರೆ.
ಮುಂದಿನ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯ ನಾಯಕರು, ಹಾಗೂ ಶಕ್ತಿ ಕೇಂದ್ರದ ಪದಾಧಿಕಾರಿಗಳು, ಪ್ರಮುಖರ ಜೊತೆ ನಡ್ಡಾ ಸಭೆಗಳನ್ನು ನಡೆಸಲಿದ್ದು, ಎರಡು ದಿನಗಳ ಕಾಲ ಹಲವು ಮಠಗಳಿಗೂ ನಡ್ಡಾ ಭೇಟಿ ಕೊಡಲಿದ್ದಾರೆ. ಚುನಾವಣಾ ಹಿನ್ನೆಲೆಯಲ್ಲಿ ಜೆ.ಪಿ.ನಡ್ಡಾ ರಾಜ್ಯ ಪ್ರವಾಸ ಮಹತ್ವ ಪಡೆದುಕೊಂಡಿದೆ.
ಜೆ.ಪಿ.ನಡ್ಡಾ ರಾಜ್ಯ ಪ್ರವಾಸದ ಸಂದರ್ಭದಲ್ಲಿ ರಾಜ್ಯದ ಸ್ಥಿತಿಗತಿ, ಚುನಾವಣಾ ತಂತ್ರಗಾರಿಕೆ ಹಾಗೂ ಸಿದ್ಧತೆ ಬಗ್ಗೆ ರಾಜ್ಯ ನಾಯಕರ ಜೊತೆಗೂ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.