BengaluruPolitics

ಫೆಬ್ರವರಿ 7ಕ್ಕೆ ದೆಹಲಿ ಚಲೋ; ಡಿ.ಕೆ.ಶಿವಕುಮಾರ್

ಬೆಂಗಳೂರು; ರಾಜ್ಯಕ್ಕೆ ಅನುದಾನ‌ ನೀಡುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ವತಿಯಿಂದ ದೆಹಲಿ ಚಲೋ ನಡೆಸುತ್ತೇವೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫೆಬ್ರವರಿ 6 ರಂದು ದೆಹಲಿ ಚಲೋ ನಡೆಸುತ್ತೇವೆ. ಫೆಬ್ರವರಿ 7ರಂದು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

 

 ರಾಜ್ಯದ ಕಾಂಗ್ರೆಸ್ ಎಲ್ಲಾ ಶಾಸಕರು, ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ದೆಹಲಿಗೆ ಹೋಗುತ್ತೇವೆ. ಪ್ರತಿಭಟನೆ ಮಾಡುತ್ತೇವೆ. ಪ್ರತಿಭಟನೆಗೆ ಅವರು ಎಲ್ಲಿ ಜಾಗ ಕೊಡುತ್ತಾರೋ ಕೊಡಲಿ. ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

 

Share Post