ಬೋಯಿಂಗ್ ಇಂಡಿಯಾ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ
ಬೆಂಗಳೂರು; ದೇವನಹಳ್ಳಿ ಬಳಿಯ ಬಿ.ಮಾರೇನಹಳ್ಳಿ ಗ್ರಾಮದಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಕ್ಯಾಂಪಸ್ನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು.
ಈ ಕ್ಯಾಂಪಸ್ ಬೋಯಿಂಗ್ ಕಂಪನಿಯ ಅತಿ ದೊಡ್ಡ ಹೂಡಿಕೆಯಾಗಿದ್ದು, 43 ಎಕರೆ ಪ್ರದೇಶದಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ಕ್ಯಾಂಪಸ್ ನಿರ್ಮಾಣ ಮಾಡಲಾಗಿದೆ.
ಇನ್ನು ಇದೇ ವೇಳೆ ಪ್ರಧಾನಿ ಮೋದಿಯವರು ಬೋಯಿಂಗ್ ಸುಕನ್ಯಾ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ. ದೇಶದ ಹೆಣ್ಣುಮಕ್ಕಳನ್ನು ಏವಿಯೇಷನ್ ಕ್ಷೇತ್ರದ ಕಡೆ ಆಕರ್ಷಿಸುವ ಸಲುವಾಗಿ ಮತ್ತು ಮಹಿಳೆಯರಿಗೆ ತರಬೇತಿ ನೀಡಲು ಉತ್ತೇಜಿಸಲಾಗುತ್ತಿದೆ.
ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಉಪಸ್ಥಿತರಿದ್ದರು.