BengaluruPolitics

ಯೂ ಟರ್ನ್ ಹೊಡೆದ್ರಾ ಅಡಗೂರು ವಿಶ್ವನಾಥ್?

ಬೆಂಗಳೂರು;ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ ಎಚ್.ವಿಶ್ವನಾಥ್ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ.

ಆರ್ ಟಿ ನಗರದ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಎಂಎಲ್ ಸಿ ಹೆಚ್.ವಿಶ್ವನಾಥ್ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ.

ಸರ್ಕಾರದ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದ ಹೆಚ್.ವಿಶ್ವನಾಥ್ ಇತ್ತೀಚೆಗೆ ಮಾಧ್ಯಮಗಳ ಜೊತೆ ಮಾತನಾಡಿ ನನ್ನ ರಕ್ತದಲ್ಲೇ ಕಾಂಗ್ರೆಸ್ ಇದೆ.

ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದರು.

ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಕೊಟ್ಟ ಬಳಿಕ ಹೆಚ್.ವಿಶ್ವನಾಥ್ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ

Share Post