ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ದೂರು
ಬೆಂಗಳೂರು; ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಬಿಜೆಪಿ ಇತರ ನಾಯಕರ ವಿರುದ್ಧ ಕಾಂಗ್ರೆಸ್ ನಿಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ನಿಯೋಗದಿಂದ ಬೆಂಗಳೂರಿನ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದೆ.
ಬಿಜೆಪಿಯ ಚುನಾವಣಾ ಅಕ್ರಮಗಳ ಕುರಿತು ಈ ದೂರಿನಲ್ಲಿ ಪ್ರಸ್ತಾಪ ಮಾಡಲಾಗಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಯನ್ನ ದೂರಿನಲ್ಲಿ ಉಲ್ಲೇಖ ಮಾಡಲಾಗಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಲಾಗಿದೆ. ಪ್ರತಿಯೊಬ್ಬ ಮತದಾರನಿಗೆ 6 ಸಾವಿರ ನೀಡಲಾಗುವುದು ಎಂದು ರಮೇಶ್ ಜಾರಕಿಹೊಳಿ ಹೇಳಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹ ಮಾಡಿದೆ.