BengaluruHealth

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೊರೊನಾ ಪಾಸಿಟಿವ್

ಬೆಂಗಳೂರು; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕರೋನಾ ಇರುವುದು ದೃಢಪಟ್ಟಿದೆ. ಅವರಿಗೆ ಅನರೋಗ್ಯದ ಕಾರಣ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು. ಅದರಲ್ಲಿ ಪಾಸಿಟಿವ್ ಬಂದಿದೆ.

 

  ಇದನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭು ಶಂಕರ್ ದೃಢಪಡಿಸಿದ್ದಾರೆ. ರಾಜ್ಯಪಾಲರು ಕ್ವಾರಂಟೀನ್ ನಲ್ಲಿದ್ದಾರೆ. ಹೀಗಾಗಿ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ತಿಳಿಸಲಾಗಿದೆ.

 

 ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಕೊರೊನಾ ಸೋಂಕಿಗೆ ಒಳಗಾಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Share Post