ಸಿಎಂ ನಿವಾಸದಲ್ಲಿ ದಿಢೀರ್ ಬ್ರೇಕ್‌ಫಾಸ್ಟ್ ಮೀಟಿಂಗ್; ಸತೀಶ್ ಜಾರಕಿಹೊಳಿ ಗೈರಾಗಿದ್ದೇಕೆ..?
ಬೆಂಗಳೂರು; ಸಿಎಂ ಹುದ್ದೆ ವಿಚಾರವಾಗಿ ಗುರುವಾರ ಹಾಗೂ ಶುಕ್ರವಾರ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಮಾತನಾಡಿದ್ದರು. ಬುಧವಾರ ರಣದೀಪ್ ಸುರ್ಜೇವಾಲಾ ಹಾಗೂ ಕೆ.ಸಿ.ವೇಣುಗೋಪಾಲ್ ಅವರು ಎಚ್ಚರಿಕೆ ಕೊಟ್ಟು ಹೋದ ಬಳಿಕವೂ ಸಿಎಂ ಸ್ಥಾನದ ವಿಚಾರವಾಗಿ ಬಹಿರಂಗ ಹೇಳಿಕೆಗಳು ಹೊರಬಿದ್ದಿದ್ದವು. ಹೀಗಿರುವಾಗಲೇ ಇಂದು ಸಿಎಂ ಸಿದ್ದರಾಮಯ್ಯ ಅವರು ದಿಢೀರ್ ಅಂತ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದಾರೆ. ಸಿಎಂ ನಿವಾಸ ಕಾವೇರಿಯಲ್ಲಿ ನಡೆದ ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಸೇರಿದಂತೆ 15ಕ್ಕೂ ಹೆಚ್ಚು ಸಚಿವರು ಪಾಲ್ಗೊಂಡಿದ್ದರು.
ಆದ್ರೆ ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಸಭೆಗೆ ಗೈರಾಗಿದ್ದರು. ಅವರಿಗೆ ಅನಾರೋಗ್ಯವಿದ್ದಿದ್ದರಿಂದ ಮೊದಲೇ ಸಭೆಗೆ ಬರೋಕೆ ಆಗೋಲ್ಲ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ನಾನೇ ಸಿಎಂ ಆಗಿ ಮುಂದವರೆಯುತ್ತೇನೆ ಎಂದಿದ್ದ ಸಿಎಂ ಸಿದ್ದರಾಮಯ್ಯ ಶುಕ್ರವಾರ ಸಂಜೆ ಯೂಟರ್ನ್ ಹೊಡೆದಿದ್ದರು. ಅನಂತರ ಯಾವ ರಾಜಕೀಯ ಬೆಳವಣಿಗೆಯಾಯಿಯೋ ಏನೋ ದಿಢೀರ್ ಅಂತ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದಾರೆ. ಇದರಲ್ಲಿ ಹಲವು ವಿಚಾರಗಳನ್ನು ಚರ್ಚೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಯಾವ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ..?
========================
ಪಕ್ಷದಲ್ಲಿ ಗೊಂದಲದ ಹೇಳಿಕೆಗಳಿಗೆ ಬ್ರೇಕ್ ಹಾಕುವುದು
ಕಾಂಗ್ರೆಸ್ ಪಕ್ಷ, ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಬಾರದು
ಲೋಕಸಭಾ ಚುನಾವಣೆಗೆ ಎಲ್ಲಾ ರೀತಿಯ ತಯಾರಿ
ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಿಕೊಳ್ಳಲು ತಂತ್ರಗಾರಿಕೆ
ಸರ್ಕಾರದ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನ
ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಮನದಟ್ಟು ಮಾಡುವುದು
ಆಡಳಿತ ಪಕ್ಷದ ಶಾಸಕರ ಬೇಕು ಬೇಡಗಳನ್ನು ಆಲಿಸುವುದು