BengaluruCinema

ಸಿಹಿ ಸುದ್ದಿ ಕೊಟ್ಟ ನಟಿ ರಮ್ಯಾ; ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ರಿ ಎಂಟ್ರಿ

ಬೆಂಗಳೂರು; ನಾಳೆ ಬೆಳಿಗ್ಗೆ ಶುಭ ಸುದ್ದಿ ನೀಡುವುದಾಗಿ ಹೇಳಿದ್ದ ಸ್ಯಾಂಡಲ್ವುಡ್ ಕ್ವೀನ್ ನಟಿ ರಮ್ಯಾ ಗಣೇಶ ಹಬ್ಬದಂದು ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಮರು ಪ್ರವೇಶಿಸುವುದಾಗಿ ಹೇಳಿದ್ದಾರೆ. ಟ್ವೀಟ್ ಮೂಲಕ ತಮ್ಮ ಹೊಸ ನಿರ್ಧಾರವನ್ನು ಪ್ರಕಟಿಸಿರುವ ಅವರು, ಆ್ಯಪಲ್ ಬಾಕ್ಸ್ ನಿರ್ಮಾಣ ಸಂಸ್ಥೆ ಮೂಲಕ ಚಿತ್ರ ತಯಾರಿಕೆಯಲ್ಲಿ ತೊಡಗುವುದಾಗಿ ಹೇಳಿದ್ದಾರೆ.

ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ಸಿಹಿಸುದ್ದಿಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ಹೌದು, ನಾನು ಮತ್ತೆ ಚಿತ್ರರಂಗಕ್ಕೆ ಹಿಂದಿರುಗುತ್ತಿದ್ದೇನೆ. ಆದರೆ, ಈ ಬಾರಿ ನನ್ನ ನಿರ್ಮಾಣ ಸಂಸ್ಥೆ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ನಿರ್ಮಾಪಕಿಯಾಗಲಿದ್ದೇನೆ ಎನ್ನುವುದು ವಿಶೇಷ ಎಂದು ಹೇಳಿದ್ದಾರೆ.

ಪ್ರಸ್ತುತ ಆಪಲ್ ಬಾಕ್ಸ್ ಸಂಸ್ಥೆ ಮೂಲಕ ಎರಡು ಚಿತ್ರ ಮಾಡಲು ಸಜ್ಜಾಗಿದ್ದೇವೆ ಎಂದು ಹೇಳುವಲ್ಲಿ ನನಗೆ ಸಂತಸವಿದೆ. ಈ ಎರಡೂ ಚಿತ್ರಗಳು ಕೆಆರ್ ಜಿ ಸಂಸ್ಥೆಯ ವಿತರಣೆಯ ಮೂಲಕ ಚಿತ್ರಮಂದಿರಗಳಲ್ಲಿ ತೆರೆಕಾಣಲಿವೆ. ಒಟಿಟಿ ವೇದಿಕೆಗಳಿಗಾಗಿ ಸಿನಿಮಾ ಮತ್ತು ವೆಬ್ ಸೀರೀಸ್ ಮಾಡಲು ಸಿದ್ಧವಾಗಿದ್ದೇವೆ ಎಂದು ತಿಳಿಸಿದ್ದಾರೆ.

Share Post