Bengaluru

ಯುವತಿ ಮೇಲೆ ಆಸಿಡ್‌ ದಾಳಿ ಪ್ರಕರಣ; 5 ಲಕ್ಷ ನೆರವು ನೀಡಿದ ಡಾ.ಕೆ.ಸುಧಾಕರ್

ಬೆಂಗಳೂರು: 
ಸುಂಕದಕಟ್ಟೆ ಬಳಿ ಅ್ಯಸಿಡ್ ದಾಳಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯ ಆರೋಗ್ಯ ವಿಚಾರಿಸಲು ಇಂದು ಸೇಂಟ್‌ ಜಾನ್ಸ್‌ ಆಸ್ಪತ್ರೆಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಭೇಟಿ ನೀಡಿದ್ದರು. ಯುವತಿಯ ಆರೋಗ್ಯ ವಿಚಾರಿಸಿದ ಅವರು, ವೈಯಕ್ತಿಕವಾಗಿ ಐದು ಲಕ್ಷ ರೂಪಾಯಿ ನೆರವು ನೀಡುವುದಾಗಿ ತಿಳಿಸಿದ್ದಾರೆ
ಸಂತ್ರಸ್ತ ಯುವತಿಗೆ ಶೇ.35% ಸುಟ್ಟ ಗಾಯಗಳಾಗಿದ್ದು ಪ್ರಸ್ತುತ ಐಸಿಯುನಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಯುವತಿಗೆ ಅಗತ್ಯವಿರುವ ಚರ್ಮ ಕಸಿ ಸೇರಿದಂತೆ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸುಧಾಕರ್‌ ಇದೇ ವೇಳೆ ತಿಳಿಸಿದ್ದಾರೆ.
ಯುವತಿಯ ಚಿಕಿತ್ಸೆ ಅಷ್ಟೇ ಅಲ್ಲದೆ ಆಕೆಯ ಮುಂದಿನ ಭವಿಷ್ಯಕ್ಕೆ ನೆರವಾಗಲು ಉದ್ಯೋಗ ಸೇರಿದಂತೆ ಎಲ್ಲ ರೀತಿಯ ಪುನರ್ವಸತಿ ಕಲ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ರೀತಿಯ ಅಮಾನವೀಯ ದುಷ್ಕೃತ್ಯಗಳು ಮರುಕಳಿಸದಂತೆ ವಿಕೃತ ಮನಸ್ಸುಗಳಿಗೆ ಕಡಿವಾಣ ಹಾಕಿ, ಯುವತಿಯರಿಗೆ ಸುರಕ್ಷಿತ ಸಮಾಜ ನಿರ್ಮಿಸುವತ್ತ ಇಡೀ ಸಮಾಜ ಕಾರ್ಯೋನ್ಮುಖವಾಗಬೇಕಿದೆ ಎಂದೂ ಸುದಾಕರ್‌ ತಿಳಿಸಿದಗದಾರೆ.
Share Post