ಪ್ರವೀಣ್ ಕುಟುಂಬಕ್ಕೆ ಸಚಿವ ಅಶ್ವತ್ಥನಾರಾಯಣ್ರಿಂದ 10 ಲಕ್ಷ ರೂ. ನೆರವು
ಬೆಂಗಳೂರು; ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕವಾಗಿ 10 ಲಕ್ಷ ರೂಪಾಯಿ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯ ಎಂದಿದ್ದಾರೆ.
10 ಲಕ್ಷ ರೂಪಾಯಿಗಳ ಚೆಕ್ ಅನ್ನು ಪ್ರವೀಣ್ ಅವರ ಕುಟುಂಬಕ್ಕೆ ತಲುಪಿಸಲಾಗುವುದು. ಅವರ ಬಲಿದಾನಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಸಚಿವ ಅಶ್ವತ್ಥನಾರಾಯಣ ಗದ್ಗದಿತರಾದರು. ಪ್ರವೀಣ್ ಅವರ ಹಂತಕರು ಎಲ್ಲೇ ಇದ್ದರೂ ಕಠಿಣ ಕ್ರಮ ಜರುಗಿಸಲಾಗುವುದು. ಪಕ್ಷದ ಕಾರ್ಯಕರ್ತರ ಆಕ್ರೋಶ ನನಗೆ ಅರ್ಥವಾಗುತ್ತದೆ. ಅಪರಾಧಿಗಳ ಹೆಡೆಮುರಿ ಕಟ್ಟುವ ಶಕ್ತಿ ಬಿಜೆಪಿ ಸರಕಾರಕ್ಕಿದೆ ಎಂದು ಸಚಿವರು ಪ್ರತಿಕ್ರಿಯಿಸಿದರು.