ಶಾಲಾ ವಿದ್ಯಾರ್ಥಿಯಿಂದಲೇ ಬಾಂಬ್ ಬೆದರಿಕೆ; ಪೊಲೀಸರಿಂದ ವಿಚಾರಣೆ
ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಡೆತನದ ಆರ್‌ಆರ್ ನಗರದ ನ್ಯಾಷನಲ್ ಹಿಲ್ ವ್ಯೂ ಶಾಲೆಗೆ ನಿನ್ನೆ ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು. ಇದನ್ನು ಕಳುಹಿಸಿದೋರು ಯಾರು ಅನ್ನೋದರ ಬಗ್ಗೆ ಪೊಲೀಸರು ಸಾಕಷ್ಟು ತಲೆಕೆಸಿಕೊಂಡಿದ್ದರು. ಆದ್ರೆ ಕೊನೆಗೂ ಇ-ಮೇಲ್ ಕಳುಹಿಸಿದ ಆಸಾಮಿ ಸಿಕ್ಕಿಬಿದ್ದಿದ್ದಾನೆ. ಆತ ಬೇರೆ ಯಾರೂ ಅಲ್ಲ, ಅದೇ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಎಂದು ಗೊತ್ತಾಗಿದೆ.
ಇದೇ 21 ರಂದು 10ನೇ ತರಗತಿಯ ಮೊದಲನೇ ಕಿರು ಪರೀಕ್ಷೆ ಇತ್ತು. ಪರೀಕ್ಷೆಯನ್ನು ಮುಂದೂಡುವ ಸಲುವಾಗಿ ವಿದ್ಯಾರ್ಥಿ ಈ ರೀತಿ ಪ್ಲ್ಯಾನ್ ಮಾಡಿದ್ದ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಆರ್‌ಆರ್ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಹುಡುಗನನ್ನು ವಿಚಾರಣೆ ನಡೆಸಿದ್ದಾರೆ. ನಂತರ ಆತನನ್ನು ಬಾಲ ಅಪರಾಧಿಗಳ ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಿದ್ದಾರೆ.