Bengaluru

15,000 ಕೋಟಿ ರೂ. ಮೊತ್ತದ ವಿವಿಧ ವಿದ್ಯುತ್ ಯೋಜನೆಗಳಿಗಾಗಿ ರಾಜ್ಯ ಸರ್ಕಾರ ಒಪ್ಪಂದ

ಬೆಂಗಳೂರು; ರಾಜ್ಯದಲ್ಲಿ ವಿವಿಧ ವಿದ್ಯುತ್‌ ಯೋಜನೆಗಳ ಜಾರಿಗಾಗಿ ಕೇಂದ್ರ ಸರ್ಕಾರ ಸ್ವಾಮ್ಯದ ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಶನ್ ಲಿಮಿಟೆಡ್ ರಾಜ್ಯ ಕಾಂಗ್ರೆಸ್‌ ಸರ್ಕಾರ ಒಪ್ಪಂದ ಮಾಡಿಕೊಂಡಿದೆ. ರಾಜ್ಯದಲ್ಲಿ ಪಂಪ್ಡ್ ಸ್ಟೋರೇಜ್, ಹೈಡ್ರೋ, ಸೋಲಾರ್ ಸೇರಿದಂತೆ 15,000 ಕೋಟಿ ರೂ. ಮೊತ್ತದ ವಿವಿಧ ಯೋಜೆನಗಳನ್ನು ಕೇಂದ್ರದ ಸಹಭಾಗಿತ್ವದಲ್ಲಿ ಮಾಡಲಾಗುತ್ತದೆ. 

ಇಂದು ವಿಧಾನಸೌಧದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ಪರವಾಗಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ಹಾಗೂ ಟಿಹೆಚ್‌ಡಿಸಿಎಲ್‌ ತಾಂತ್ರಿಕ ನಿರ್ದೇಶಕ ಭೂಪೇಂದ್ರ ಗುಪ್ತ ಅವರು ಈ ಒಪ್ಪಂದ ಪತ್ರಕ್ಕೆ ಸಹಿ ಹಾಕಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್‌ ಬೇಡಿಕೆಗಳನ್ನು ಪರಿಹರಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ.

Share Post