ಮಾನಸಿಕ ಖಿನ್ನತೆಯಿಂದ ಮಹಿಳಾ ಟೆಕ್ಕಿ ಆತ್ಮಹತ್ಯೆ
ಬೆಂಗಳೂರು; ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ 26 ವರ್ಷದ ಮಹಿಳಾ ಟೆಕ್ಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗ್ಲೋಬಲ್ ವಿಲೇಜ್‌ನಲ್ಲಿರುವ ಐಟಿ ಕಂಪನಿಯೊಂದರ ಉದ್ಯೋಗಿಯಾಗಿದ್ದ ಸ್ವಾತಿ ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಎರಡು ವರ್ಷದ ಹಿಂದೆ ದಾಮೋದರ್ ಎಂಬಾತನನ್ನು ಸ್ವಾತಿ ವರಿಸಿದ್ದಳು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಆಕೆ ಕಳೆದ ತಡರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ.