BengaluruCinema

ಚಿತ್ರರಂಗದಲ್ಲಿ 3 ಸಾವಿರ ಕೋಟಿ ಹೂಡಲಿದೆಯಂತೆ ಹೊಂಬಾಳೆ ಫಿಲ್ಮ್ಸ್‌

ಬೆಂಗಳೂರು; ಕೆಜಿಎಫ್‌, ಕಾಂತಾರಾ ಸೇರಿದಂತೆ ಹಲವು ಅದ್ದೂರಿ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲ್ಮ್ಸ್‌ ಭಾರಿ ಮೊತ್ತದ ಹಣವನ್ನು ಚಿತ್ರರಂಗದಲ್ಲಿ ಹೂಡಲು ತೀರ್ಮಾನ ಮಾಡಿದೆ. ಈ ವಿಚಾರವನ್ನು ನಿರ್ಮಾಪಕ ವಿಜಯ್‌ ಕಿರಗಂದೂರು ಅವರೇ ತಿಳಿಸಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ಚಿತ್ರರಂಗದಲ್ಲಿ ಹೊಂಬಾಳೆ ಫಿಲ್ಮ್ಸ್‌ ಮೂರು ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಹೊಂಬಾಳೆ ಫಿಲ್ಮ್ಸ್‌ ಚಿತ್ರರಂಗದಲ್ಲಿ ಸಾವಿರ ಕೋಟಿ ರೂಪಾಯಿಯಷ್ಟು ಹಣವನ್ನು ಹೂಡಿಕೆ ಮಾಡಿದೆ. ಕನ್ನಡ, ಮಲಯಾಳಂ, ತೆಲುಗು ಮತ್ತು ತಮಿಳಿನಲ್ಲಿ ಹಲವು ಚಿತ್ರಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಬಾಲಿವುಡ್ ಗೂ ಎಂಟ್ರಿ ಕೊಡಲು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಶಾರುಖ್ ಖಾನ್ ಸಿನಿಮಾ ಮಾಡುವ ಕುರಿತು ಮಾತುಕತೆ ಕೂಡಾ ನಡೆದಿದೆಯಂತೆ. ಕನ್ನಡ ನಿರ್ಮಾಣ ಸಂಸ್ಥೆಯೊಂದು ಸಿನಿಮಾ ರಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಈ ಪ್ರಮಾಣದ ಹಣವನ್ನು ಹೂಡಿಕೆ ಮಾಡುತ್ತಿದೆ. ಅಲ್ಲದೇ, ಭಾರತೀಯ ಬಹುತೇಕ ಭಾಷೆಯ ಚಿತ್ರಗಳಲ್ಲಿ ಸಿನಿಮಾ ಮಾಡುವ ಗುರಿ ಹೊಂದಲಾಗಿದೆ. ಇದರ ಭಾಗವಾಗಿಯೇ ದಕ್ಷಿಣದ ಅಷ್ಟೂ ಭಾಷೆಗಳಲ್ಲಿ ಈಗಾಗಲೇ ಚಿತ್ರ ನಿರ್ಮಾಣವನ್ನು ಮಾಡಲಾಗುತ್ತಿದೆ. ಸದ್ಯದಲ್ಲೇ ಬಾಲಿವುಡ್ ನಲ್ಲೂ ಸಿನಿಮಾ ಮಾಡುವ ಯೋಜನೆಯೊಂದು ಬಹಿರಂಗಗೊಳ್ಳಲಿದೆ.

Share Post