ಕೊರೊನಾ ವರದಿ: ರಾಜ್ಯದಲ್ಲಿಂದು 31 ಸಾವಿರ ಮಂದಿಗೆ ಸೋಂಕು, 50 ಜನ ಸಾವು
ಬೆಂಗಳೂರು: ರಾಜ್ಯದಲ್ಲಿ ಇಂದು 31,198 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಐವತ್ತು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೂ ಕೊರೊನಾ ಸೋಂಕಿತರ ಸಂಖ್ಯೆ 37,23,694 ಕ್ಕೆ ಹೆಚ್ಚಿದೆ. ಸೋಂಕಿತರಲ್ಲಿ 33,96,093 ಜನ ಗುಣಮುಖರಾಗಿದ್ದಾರೆ. ಇಲ್ಲಿವರೆಗೂ ಕೊರೊನಾದಿಂದ 38,804 ಜನ ಮೃತಪಟ್ಟಿದ್ದಾರೆ. ಒಟ್ಟು 2,88,767 ಮಂದಿಯಲ್ಲಿ ಕೋವಿಡ್ ಸಕ್ರಿಯವಾಗಿದೆ.
ರಾಜ್ಯ ರಾಜಧಾನಿಯಲ್ಲಿ ಇಂದು ಒಂದೇ ದಿನ 15,199 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 16,81,674 ಕ್ಕೆ ಏರಿಕೆಯಾಗಿದೆ. 16,81,674 ಸೋಂಕಿತರ ಪೈಕಿ 15,04,941 ಜನರನ್ನು ಡಿಸ್ಚಾರ್ಜ್ ಮಾಡಲಾಗಿದೆ. ನಗರದಲ್ಲಿಂದು ಕೊರೊನಾ ಸೋಂಕಿಗೆ 8 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 16,554 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 1,60,178 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಂದಿನ 28/01/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/xEdj6oy5SP @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/MDF5JBeE69
— K'taka Health Dept (@DHFWKA) January 28, 2022