Bengaluru

ಇಂದು 32,793 ಮಂದಿಗೆ ಕೊರೊನಾ ಪಾಸಿಟಿವ್:‌ ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಬೆಂಗಳೂರು: 24 ಗಂಟೆಯಲ್ಲಿ ರಾಜ್ಯದಲ್ಲಿ 32,793 ಮಂದಿಗೆ ಕೊರೊನಾ ಸೋಂಕು ತಗುಲಿದ್ದು,  ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಇದುವರೆಗೂ ರಾಜ್ಯದಲ್ಲಿ ಸೋಂಕಿನ ಪ್ರಮಾಣ  31,86,040 ಕ್ಕೆ ಏರಿಕೆಯಾಗಿದೆ. ಇದರಲ್ಲಿ 29,77,743 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಈವರೆಗೆ ಕೊರೊನಾದಿಂದ 38,418 ಮಂದಿ ರಾಜ್ಯದಲ್ಲಿ ಸಾವನ್ನಪ್ಪಿದ್ದಾರೆ. ಒಟ್ಟು 1,69,850 ಜನರಲ್ಲಿ ಕೊರೊನಾ ಸೋಂಕು ಪ್ರಸ್ತುತ ಸಕ್ರಿಯವಾಗಿದೆ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 22,284 ಜನರಿಗೆ  ಕೊರೊನಾ ಸೋಂಕು ತಗುಲಿದೆ. ಐದು ಮಂದಿ ಸಾವನ್ನಪ್ಪಿದ್ದಾರೆ.  ಈವರೆಗೆ ರಾಜಧಾನಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 13,95,736 ಕ್ಕೆ ಏರಿದ್ದು,  12,50,175 ಜನರು ಗುಣಮುಖರಾಗಿದ್ದಾರೆ. ನಗರದಲ್ಲಿ ಕೊರೊನಾದಿಂದ ಈವರೆಗೆ 16,448 ಜನರ ಸಾವು ಸಂಭವಿಸಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 15 ಕ್ಕೆ ಏರಿಕೆಯಾಗಿದೆ.

Share Post