ನಿಗಮ-ಮಂಡಳಿಗಳಲ್ಲಿ 36 ಶಾಸಕರು, 39 ಕಾರ್ಯಕರ್ತರಿಗೆ ಸ್ಥಾನಮಾನ
ಬೆಂಗಳೂರು; ನಿಗಮ-ಮಂಡಳಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ನೇಮಕದ ವಿಚಾರ ಹಲವು ತಿಂಗಳಿನಿಂದ ನೆನೆಗುದಿಗೆ ಬಿದ್ದಿತ್ತು. ಕೊನೆಗೆ ಸಂಕ್ರಾಂತಿ ದಿನ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಆದ್ರೆ ಅದೂ ಆಗಲಿಲ್ಲ. ಇದೀಗ ಕೊನೆಗೂ ಅದಕ್ಕೆ ಮುಹೂರ್ತಿ ಫಿಕ್ಸ್ ಆಗಿದೆ. ಯಾವುದೇ ಕ್ಷಣದಲ್ಲಿ ಪಟ್ಟಿ ಬಿಡುಗಡೆ ಮಾಡಬಹುದು ಅಂತ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ನಿಗಮ-ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರ ಪಟ್ಟಿಗೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ. ಯಾವುದೇ ಕ್ಷಣದಲ್ಲಿ ಪಟ್ಟಿ ಬಿಡುಗಡೆಯಾಗಲಿದೆ. 36 ಶಾಸಕರು ಹಾಗೂ 39 ಕಾರ್ಯಕರ್ತರಿಗೆ ನಿಗಮ-ಮಂಡಳಿಗಳಲ್ಲಿ ಅವಕಾಶ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇಂದೇ ಪಟ್ಟಿ ರಿಲೀಸ್ ಆಗುವ ಸಾಧ್ಯತೆ ಇದೆ.