BengaluruCinema

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ 4.49 ಕೋಟಿ ರೂ. ಅನುದಾನ

ಬೆಂಗಳೂರು; ಮಾರ್ಚ್ 23 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಆಯೋಜಿಸಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ 4.49 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದೆ.

ಇಂದು ಸುದ್ದಿಗೋಷ್ಠಿ ನಡೆಸಿದ ಸಚಿವ ಆರ್‌.ಅಶೋಕ್‌ ಈ ವಿಚಾರವನ್ನು ತಿಳಿಸಿದ್ದಾರೆ. ಈ ವರ್ಷ ಕಳೆದ ವರ್ಷಕ್ಕಿಂದ ಹೆಚ್ಚು ಹಣವನ್ನು ನೀಡಿದ್ದೇವೆ. ಈ ಬಾರಿಯ ಚಿತ್ರೋತ್ಸವಕ್ಕೆ ಬಾಲಿವುಡ್‌ ನಟ-ನಟಿಯರಿಗೆ ಆಹ್ವಾನ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ರೇಖಾ ಸೇರಿದಂತೆ ಹಲವು ಕಲಾವಿದರು ಈ ಚಿತ್ರೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಇದ್ರಲ್ಲಿ 300ಕ್ಕೂ ಹೆಚ್ಚು ಸಿನಿಮಾಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ ಎಂದು ಸಚಿವ ಆರ್‌.ಅಶೋಕ್ ತಿಳಿಸಿದ್ದಾರೆ.

Share Post