BengaluruCrime

40 ಲಕ್ಷ ಹಣದೊಂದಿಗೆ ಶಾಸಕರ ಪುತ್ರ ಲೋಕಾಯುಕ್ತ ಬಲೆಗೆ

ಬೆಂಗಳೂರು; ಟೆಂಡರ್ ಕೊಡಿಸಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

40 ಲಕ್ಷ ರೂಪಾಯಿ ಸ್ವೀಕಾರ ಮಾಡುತ್ತಿರುವ ವೇಳೆ ಪ್ರಶಾಂತ್ ಸಿಕ್ಕಿಬಿದ್ದಿದ್ದಾರೆ. ಟೆಂಡರ್ ಕೊಡಿಸುವ ವಿಚಾರದಲ್ಲಿ ಗುತ್ತಿಗೆದಾರನಿಂದ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಇದರಲ್ಲಿ ಮುಂಗಡವಾಗಿ 40 ಲಕ್ಷ ರೂಪಾಯಿ ಪಡೆಯಲಾಗುತ್ತಿತ್ತು.

ಶಾಸಕರ ಪುತ್ರ ಪ್ರಶಾಂತ್‌ BWSSB ಮುಖ್ಯ ಲೆಕ್ಕಾಧಿಕಾರಿಯಾಗಿದ್ದಾರೆ. KSDL ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎನ್ನಲಾಗುತ್ತಿದೆ. ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ವಿರೂಪಾಕ್ಷಪ್ಪ ಕಚೇರಿಯಲ್ಲಿ 3 ಬ್ಯಾಗ್​ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿವೆ.

Share Post