BengaluruPolitics

ಕಾಂಗ್ರೆಸ್‌ಗೆ ಬರಲು 42 ಮಂದಿ ಅರ್ಜಿ ಹಾಕಿದ್ದಾರೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷದ 42 ಮುಖಂಡರು ಕಾಂಗ್ರೆಸ್‌ ಪಕ್ಷಕ್ಕೆ ಬರುವುದಾಗಿ ಅರ್ಜಿ ಹಾಕಿಕೊಂಡಿದ್ದಾರೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಬಾಂಬ್‌ ಸಿಡಿಸಿದ್ದಾರೆ. ಮಾಜಿ ಶಾಸಕ ರಾಮಣ್ಣ ಲಮಾಣಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಂಬರ್‌ ಹೇಳಬಾರದು ಅಂದುಕೊಂಡಿದ್ದೆ. ಆದ್ರೆ ಹೇಳಲೇಬೇಕಾದ ಪರಿಸ್ಥಿತಿ ಬಂದಿದೆ ಎಂದರು.

ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿ ವಿರೋಧಿಸಿ ಬರೋಬ್ಬರು 42 ಮುಖಂಡರು ಕಾಂಗ್ರೆಸ್‌ ಪಕ್ಷಕ್ಕೆ ಬರುವವರಿದ್ದಾರೆ. ಇನ್ನು ಆಮ್‌ ಆದ್ಮಿ ಪಾರ್ಟಿಯಿಂದ ಸ್ಪರ್ಧೆ ಮಾಡಿದ್ದ 100ಕ್ಕೂ ಹೆಚ್ಚು ಅಭ್ಯರ್ಥಿಗಳು ಒಟ್ಟಾಗಿ ಕಾಂಗ್ರೆಸ್‌ ಸೇರಿದ್ದಾರೆ. ಬಿಜೆಪಿಯ ಒಂದು ಟೀಂ ಕೂಡಾ ಸಿನಿಮೀಯ ರೀತಿಯಲ್ಲಿ ನಮ್ಮ ಜೊತೆ ಮಾತುಕತೆಯಾಡುತ್ತಿದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

 

Share Post