ಶೇಕಡಾ 50ರಷ್ಟು ಸರ್ಕಾರದ ಬಿಲ್ಗಳು ರಿಲೀಸ್; ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು; ಸರ್ಕಾರದ ಬಿಲ್ಗಳನ್ನು ಶೇಕಡಾ 50ರಷ್ಟನ್ನು ರಿಲೀಸ್ ಮಾಡಲಿದ್ದೇವೆ. 432 ಕೋಟಿ ರೂಪಾಯಿ ಮೊತ್ತದ ಬಿಬಿಎಂಪಿ ಕಾಮಗಾರಿ ಬಿಲ್ ಬಿಡುಗಡೆ ಮಾಡುತ್ತೇವೆ ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮತ್ತೆ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಮಳೆ ಶುರುವಾಗುವುದರೊಳಗೆ ಎಲ್ಲಾ ಕೆಲಸ ಮುಗಿಸಲು ಸೂಚನೆ ನೀಡಿದ್ದೇನೆ ಎಂದರು. ಕಾಮಗಾರಿ ಬೇಗ ಬೇಗ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚನೆ ಕೊಟ್ಟಿದ್ದೇನೆ. ಅಕ್ಟೋಬರ್ 7 ರಂದು ಟ್ರಾಫಿಕ್ ಕಂಟ್ರೋಲ್ ಕುರಿತು ಸಭೆ ಮಾಡುತ್ತಿದ್ದು, ಟ್ರಾಫಿಕ್ ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತೇವೆ. ಬೆಂಗಳೂರಿನ ಎಲ್ಲಾ ಕಡೆ ಟ್ರಾಫಿಕ್ ಕಂಟ್ರೋಲ್ ಮಾಡುವುದು ಅಸಾಧ್ಯ. ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕ್ರಮ ತೆಗೆದುಕೊಳ್ಳಬೇಕು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.