545 ಮಂದಿ ಪಿಎಸ್‌ಐ ನೇಮಕಾತಿ ಹಗರಣ; ನ್ಯಾಯಾಂಗ ತನಿಖೆಗೆ ಆದೇಶ
ಬೆಂಗಳೂರು; ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ 545 ಮಂದಿ ಪಿಎಸ್‌ಐ ನೇಮಕಾತಿ ಪರೀಕ್ಷೆ ವೇಳೆ ನಡೆದ ಹಗರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಒಪ್ಪಿಸಿದೆ. ನಿವೃತ್ತ ನ್ಯಾ.ಬೀರಪ್ಪ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯಲಿದೆ ಎಂದು ರಾಜ್ಯ ಸರ್ಖಾರ ತಿಳಿಸಿದೆ. ಈ ತನಿಖೆಗೆ ಸಿಐಡಿ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಸಹಕಾರ ನೀಡಬೇಕೆಂದು ಸೂಚನೆ ಕೊಡಲಾಗಿದೆ.
ಮೂರು ತಿಂಗಳೊಳಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. 2021ರ ಜನವರಿ 21ರಂದು 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. 2021ರ ಅಕ್ಟೋಬರ್ 3ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಅಕ್ರಮಗಳು ನಡೆದಿರುವುದು ಬಯಲಾಗಿತ್ತು. ಪ್ರಕರಣ ಸಂಬಂಧ ಸುಮಾರು 80ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.