ರಾಜ್ಯದಲ್ಲಿ 92 ಕೊರೊನಾ ಪ್ರಕರಣಗಳ ಪತ್ತೆ; ಇಂದು ತಾಂತ್ರಿಕ ಸಲಹಾ ಸಮಿತಿ ಮಹತ್ವದ ಸಭೆ
ಬೆಂಗಳೂರು; ಕೇರಳ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲೂ ಕೂಡಾ ದಿನೇ ದಿನೇ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದೆ. ರಾಜ್ಯದಲ್ಲಿ 92 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢವಾಗಿವೆ. ಈ ಹಿನ್ನೆಲೆಯಲ್ಲಿ ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಇಂದು ಮಧ್ಯಾಹ್ನ ಈ ಸಂಬಂಧ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ, ಮುಖ್ಯಸ್ಥರು, ಆರೋಗ್ಯ ಇಲಾಖೆ ಅಧಿಕಾರಿಗಳು, ತಜ್ಞರು ಭಾಗವಹಿಸಲಿದ್ದಾರೆ. ಅಧಿಕಾರಿಗಳು ಹಾಗೂ ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಒಂದು ಮಾರ್ಗಸೂಚಿ ಪ್ರಕಟ ಮಾಡಲಾಗಿದೆ. ಅರವತ್ತು ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಇನ್ನೊಂದೆಡೆ ಬಸ್‌ಗಳಲ್ಲಿ ಕೂಡಾ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಟೆಸ್ಟ್‌ಗಳ ಸಂಖ್ಯೆಯನ್ನೂ ಹೆಚ್ಚು ಮಾಡಲಾಗಿದೆ.
ಸಭೆಯಲ್ಲಿ ಏನೇನು ಚರ್ಚೆ ಆಗುತ್ತದೆ..?
೧. ರಾಜ್ಯದ ಗಡಿ ಜಿಲ್ಲೆಗಳಲ್ಲಿನ ಪರಿಸ್ಥಿತಿ ಹೇಗಿದೆ, ಅಲಲಿ ಏನೆಲ್ಲಾ ಮುಂಜಾಗ್ರತೆ ಕೈಗೊಳ್ಳಬೇಕು..?
೨. ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗಳಲ್ಲಿ ಬೆಡ್‌ಗಳ ಮೀಸಲು, ಔಷಧಿ ಹಾಗೂ ಉಪಕರಣಗಳ ವ್ಯವಸ್ಥೆ
೩. ತುರ್ತಾಗಿ ಖರೀದಿ ಮಾಡಬೇಕಾದ ಔಷಧಗಳು ಹಾಗೂ ಉಪಕರಣಗಳ ಬಗ್ಗೆ ಚರ್ಚೆ
೪. ICU ಬೆಡ್, ಆಕ್ಸಿಜನ್ ಬೆಡ್ ವ್ಯವಸ್ಥೆ ಹೇಗಿದೆ..? ಯಾವ್ಯಾವ ಆಸ್ಪತ್ರೆಯಲ್ಲಿ ಎಷ್ಟು ಬೆಡ್‌ಗಳು ಲಭ್ಯವಿವೆ..?
೫. ಖಾಸಗಿ ಆಸ್ಪತ್ರೆಗಳಲ್ಲಿ RTPCR ಗೆ ದರ ನಿಗದಿ ಬಗ್ಗೆ ಚರ್ಚೆ ಸಾಧ್ಯತೆ