ಮಹಿಳೆಗೆ ಕಿರುಕುಳ ಕೊಟ್ಟ ಆರೋಪ ಪ್ರಕರಣ; ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ಗೆ ಜಾಮೀನು
ನವದೆಹಲಿ; ಅಸ್ಸಾಂನ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಅಂಗಿತಾ ದತ್ತಾ ಎಂಬುವವರಿಗೆ ಕಿರುಕುಳ ಕೊಟ್ಟ ಆರೋಪ ಪ್ರಕರಣ ಸಂಬಂಧ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಐವತ್ತು ಸಾವಿರ ರೂಪಾಯಿ ಬಾಂಡ್ ಪಡೆದು ಷರತ್ತುಬದ್ಧ ಜಾಮೀನು ನೀಡಲಾಗಿದೆ. ಜೊತೆಗೆ ಅಸ್ಸಾಂ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಪ್ರಕರಣದಲ್ಲಿ ಪೊಲೀಸರು ಎಫ್‌ಐಾರ್ ದಾಖಲಿಸಲು ವಿಳಂಬ ಮಾಡಿರುವುದನ್ನು ಬಿಆರ್ ಗವಾಯಿ ಹಾಗೂ ಸಂಜಯ್ ಕರೋಲ್ ಅವರಿದ್ದ ಪೀಠ ಪರಿಗಣಿಸಿದ್ದು, ಶ್ರೀನಿವಾಸ್ ನಿರೀಕ್ಷಣಾ ಜಾಮೀನು ಪಡೆಯಲು ಅರ್ಹರು ಎಂದು ಹೇಳಿದೆ. ಇದಕ್ಕೂ ಮೊದಲು ಶ್ರೀನಿವಾಸ್ ಅವರು ಎಫ್‌ಐಆರ್ ದಾಖಲಿಸಲು ಅಸ್ಸಾಂ ಪೊಲೀಸರಿಗೆ ಯಾವ ಅಧಿಕಾರವೂ ಇಲ್ಲ. ಹೀಗಾಗಿ ಎಫ್‌ಐಆರ್ ರದ್ದು ಮಾಡಬೇಕೆಂದು ಗುವಾಹಟಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಹೈಕೋರ್ಟ್ ಶ್ರೀನಿವಾಸ್ ಅರ್ಜಿಯನ್ನು ವಜಾ ಮಾಡಿತ್ತು.
ಈ ಹಿನ್ನೆಲೆಯಲ್ಲಿ ಶ್ರೀನಿವಾಸ್ ಅವರಿಗೆ ಬಂಧನದ ಭೀತಿ ಎದುರಾಗಿತ್ತು. ಹೀಗಾಗಿ ಅವರು ನಿರೀಕ್ಷಣಾ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.