BengaluruCrime

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

ಬೆಂಗಳೂರು; ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಇಲ್ಲಿನ ಬ್ಯಾಟರಾಯನಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಬಾಪೂಜಿನಗರದಲ್ಲಿ ಈಗ ಘಟನೆ ನಡೆದಿದೆ. ಶಿಲ್ಪಾ ಎಂಬ ಮಹಿಳೆ ಅವರ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಶಿಲ್ಪಾ ಸಾವು ಅನುಮಾನಾಸ್ಪದವಾಗಿದ್ದು, ಇದು ಕೊಲೆಯೋ ಆತ್ಮಹತ್ಯೆಯೋ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.

Share Post