ಸಾವರ್ಕರ್, ಹೆಡಗೆವಾರ್ ಪಾಠಗಳ ಕೈಬಿಟ್ಟ ಸರ್ಕಾರ; ಮಧು ಬಂಗಾರಪ್ಪ ಹೇಳಿದ್ದೇನು..?
ಬೆಂಗಳೂರು; ಶಾಲಾ ಪಠ್ಯದಲ್ಲಿ ಸಾವರ್ಕರ್, ಹೆಡಗೆವಾರ್ ಪಠ್ಯಕ್ಕೆ ಕೊಕ್ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಚಕ್ರವರ್ತಿ ಸೂಲಿಬೆಲೆ ಬರೆದ ಪಾಠಕ್ಕೂ ಕತ್ತರಿ ಹಾಕಲಾಗಿದೆ ಎಂದು ಹೇಳಿದರು.
ಸಂಪುಟ ಸಭೆಯಲ್ಲಿ ಪಠ್ಯ ಪರಿಷ್ಕರಣೆಗೆ ತೀರ್ಮಾನ ಮಾಡಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಬಾರಿ ಸಾವಿತ್ರಿಬಾಯಿ ಪುಲೆ ಪಾಠ ಸೇರ್ಪಡೆ ಮಾಡಲಾಗಿದೆ. ಅಂಬೇಡ್ಕರ್ ಕವನ, ನೆಹರೂ ಪತ್ರ ಕೂಡಾ ಮರು ಸೇರ್ಪಡೆ ಮಾಡಲಾಗುತ್ತಿದೆ. ಸಮಾಜ ವಿಜ್ಞಾನ ಹಾಗೂ ಕನ್ನಡ ಪಠ್ಯದಲ್ಲಿ ಆರರಿಂದ ಹತ್ತನೇ ತರಗತಿವರೆಗೆ ಕೆಲವು ಬದಲಾವಣೆ ಮಾಡಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇನ್ನು ಪಠ್ಯ ಪರಿಷ್ಕರಣೆಗೆ ರಾಜಪ್ಪ ದಳವಾಯಿ ನೇತೃತ್ವದಲ್ಲಿ ಐವರ ಸಮಿತಿ ರಚನೆ ಮಾಡಲಾಗಿದೆ ಎಂದೂ ಅವರು ಹೇಳಿದ್ದಾರೆ.