Bengaluru

ಬೆಂಗಳೂರಿನಲ್ಲಿ ಅದ್ದೂರಿ ಗಣರಾಜ್ಯೋತ್ಸವ; ರಾಜ್ಯಪಾಲರಿಂದ ಧ್ವಜಾರೋಹಣ

ಬೆಂಗಳೂರು; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರು ಇಂದು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜ್ಯಪಾಲರನ್ನು ಬರಮಾಡಿಕೊಂಡರು. ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ , ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಉಪಸ್ಥಿತರಿದ್ದರು.

Share Post