BengaluruCrime

ಬೆಂಗಳೂರಿನಲ್ಲಿ ಹಿಟ್‌ ಅಂಡ್‌ ರನ್‌ ಕೇಸ್‌; ಇಬ್ಬರು ಮಹಿಳೆಯರ ದುರ್ಮರಣ

ಬೆಂಗಳೂರು; ಬೆಂಗಳೂರಿನಲ್ಲಿ ಹಿಟ್‌ ಅಂಡ್‌ ರನ್‌ ಪ್ರಕರಣ ನಡೆದಿದ್ದು, ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ. ಕೆಆರ್ ಪುರಂನಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ಅತಿ ವೇಗದಿಂದ ಬಂದ ಇನ್ನೋವಾ ಕಾರು ಆಟೋಗೆ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ನಡೆದಿದೆ.

ಆಟೋದಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿಯಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಚಾಲಕ ಖಾಲಿದ್, ಪತ್ನಿ ತಾಸೀನಾ, ಸಹೋದರಿ ಫಾಝಿಲಾ ಹಾಗೂ ಇಬ್ಬರು ಮಕ್ಕಳು ಆಟೋದಲ್ಲಿದ್ದರು. ತಾಸೀನಾ, ಫಾಝಿಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Share Post