ಹೊಸ ಕರ್ನಾಟಕಕ್ಕೆ ಹೊಸ ಸರ್ಕಾರ ಬರಲಿದೆ; ಡಿ.ಕೆ.ಶಿವಕುಮಾರ್
ಬೆಂಗಳೂರು; ರಾಜ್ಯದಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬೀಸಿದೆ. ಡಬಲ್ ಎಂಜಿನ್ ಸರ್ಕಾರ ಫೇಲ್ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಚುನಾವಣೋತ್ತರ ಸಮೀಕ್ಷೆ ವರದಿ ಬಂದ ನಂತರ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಸಿಗಲಿದೆ.
ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದಲ್ಲಿ ಅಭಿವೃದ್ಧಿಯಾಗಿಲ್ಲ. ಹೀಗಾಗಿ ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ನಮಗೆ ಗ್ರೌಂಡ್ ರಿಪೋರ್ಟ್ ಸಿಕ್ಕಿದ್ದು, ಕಾಂಗ್ರೆಸ್ಗೆ ಸ್ಪಷ್ಟವಾದ ಬಹುಮತ ಸಿಗುತ್ತದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.