BengaluruPolitics

ಒಂದು ಸಾಲಿನ ನಿರ್ಧಾರ ಕೈಗೊಳ್ಳಲಾಗಿದೆ; ಸುರ್ಜೇವಾಲ

ಬೆಂಗಳೂರು; ಶಾಸಕಾಂಗ ಪಕ್ಷದ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಕೈಗೊಳ್ಳಲಾಗಿದೆ. ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಎಲ್ಲರೂ ಒಕ್ಕೊರಲ ನಿರ್ಧಾರ ಕೈಗೊಂಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲಾ ಹೇಳಿದ್ದಾರೆ.

ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಊಟದ ನಂತರ ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಅನಂತರ ಸಭೆಯಲ್ಲಿ ಕೈಗೊಂಡ ನಿರ್ಧಾರದೊಂದಿಗೆ ವೀಕ್ಷಕರು ದೆಹಲಿಗೆ ತೆರಳಿ ಹೈಕಮಾಂಡ್‌ಗೆ ತಿಳಿಸಲಿದ್ದಾರೆ. ಹೈಕಮಾಂಡ್‌ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಸುರ್ಜೇವಾಲಾ ತಿಳಿಸಿದ್ದಾರೆ.

ಶಾಸಕಾಂಗ ಸಭೆಯಲ್ಲಿ ಕೈಗೊಳ್ಳಲಾದ ಒಂದು ಸಾಲಿನ ನಿರ್ಣಯಕ್ಕೆ ಎಲ್ಲಾ ಶಾಸಕರು ಒಮ್ಮತದಿಂಧ ಅನುಮೋದನೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರು ಕೂಡಾ ಇದಕ್ಕೆ ಅನುಮೋದನೆ ನೀಡಿದ್ದಾರೆ ಎಂದು ಸುರ್ಜೇವಾಲಾ ಹೇಳಿದ್ದಾರೆ.

 

Share Post