BengaluruCrime

ಪಿಎಫ್‌ಐ ಆಸ್ತಿ ಸರ್ವೆ, ಮುಟ್ಟುಗೋಲಿಗೆ ಕ್ರಮ; ಆರಗ ಜ್ಞಾನೇಂದ್ರ

ಬೆಂಗಳೂರು; ನಿನ್ನೆ ದೇಶಾದ್ಯಂತ ಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಐದು ವರ್ಷಗಳ ಕಾಲ ಬ್ಯಾನ್‌ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ, ಪಿಎಫ್‌ಐನ ಆಸ್ತಿಗಳ ಬಗ್ಗೆ ತನಿಖೆ ಶುರು ಮಾಡಲಾಗಿದೆ. ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ನಡೆದಿದೆ. 

ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಪಿಎಫ್‍ಐ ಸಂಘಟನೆಗಳ ಆಸ್ತಿ ಬಗ್ಗೆ ಸರ್ವೆ ಕಾರ್ಯ ಆಗುತ್ತಿದೆ. ಎಷ್ಟು ಆಸ್ತಿ ಇದೆ ಅಂತ ಸರ್ವೆ ಬಳಿಕ ಮಾಹಿತಿ ಲಭ್ಯವಾಗಲಿದೆ. ಸರ್ವೆಯ ಬಳಿಕ ಮುಟ್ಟುಗೋಲು ಪ್ರಕ್ರಿಯೆ ನಡೆಯುತ್ತೆ ಎಂದು ಹೇಳಿದ್ದಾರೆ. ಈಗಾಗಲೇ ರಾಜ್ಯಗಳಿಗೆ ಕೇಂದ್ರ ಅಧಿಕಾರ ಕೊಟ್ಟಿದೆ. ರಾಜ್ಯಕ್ಕೆ ಅಧಿಕಾರ ಕೊಟ್ಟಿರೋ ಹಿನ್ನೆಲೆಯಲ್ಲಿ ಮುಂದಿನ ಪ್ರಕ್ರಿಯೆಗಳನ್ನು ಕಾನೂನು ಪ್ರಕಾರ ನಾವು ಮಾಡ್ತೀವಿ ಎಂದು ತಿಳಿಸಿದರು.

 

Share Post