BengaluruPolitics

ರಾಜ್ಯದಲ್ಲಿ ಒಟ್ಟು 3130 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ

ಬೆಂಗಳೂರು; ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 3130 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರವಾಗಿದೆ. ಇಂದು ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನವಾಗಿದೆ. ಹೀಗಾಗಿ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವವರ ಮನವೊಲಿಸಲು ಕಾರ್ಯತಂತ್ರ ನಡೆಯುತ್ತಿದೆ.

ಬಿಜೆಪಿಯ 224, ಕಾಂಗ್ರೆಸ್‌ನ 223 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರವಾಗಿದೆ. ಮೇಲುಕೋಟೆಯಲ್ಲಿ ಕಾಂಗ್ರೆಸ್‌ ಪ್ಕಷ ದರ್ಶನ್‌ ಪಟ್ಟಣ್ಣಯ್ಯ ಅವರಿಗೆ ಬೆಂಬಲ ಸೂಚಿಸಿರುವುದರಿಂದ ಅಲ್ಲಿ ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಇನ್ನು ಜೆಡಿಎಸ್‌ 211 ಕ್ಷೇತ್ರಗಳಲ್ಲಿ ಸ್ಪರ್ಧೆಯಲ್ಲಿದೆ. ಇನ್ನು ಆಮ್‌ ಆದ್ಮಿ ಪಕ್ಷ 212 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರವಾಗಿವೆ. ಬಿಎಸ್‌ಪಿಯಿಂದ 137 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇನ್ನು ಎನ್‌ಸಿಪಿ ಹಾಗೂ ಸಿಪಿಐಎಂನ ತಲಾ ನಾಲ್ವರು ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. 726 ಅಭ್ಯರ್ಥಿಗಳು ನೋಂದಾಯಿತ ಹಾಗೂ ಮನ್ನಣೆ ಇಲ್ಲದ ಪಕ್ಷಗಳಿಂದ ಕಣದಲ್ಲಿದ್ದಾರೆ.

1379 ಅಭ್ಯರ್ಥಿಗಳು ಪಕ್ಷೇತರರಾಗಿ ಕಣದಲ್ಲಿದ್ದಾರೆ. ಇದರಲ್ಲಿ ಒಂದಷ್ಟು ಮಂದಿ ಪಕ್ಷಗಳಿಂದ ಟಿಕೆಟ್‌ ಸಿಗದಿದ್ದಕ್ಕೆ ಬಂಡಾಯವಾಗಿ ಸ್ಪರ್ಧಿಸಿದ್ದಾರೆ. ಇವರಲ್ಲಿ ಕೆಲವರು ನಾಮಪತ್ರ ಹಿಂಪಡೆಯುವ ಸಾಧ್ಯತೆ ಇದೆ.

Share Post