ಹೊಟ್ಟೆನೋವು ಹಿನ್ನೆಲೆ; ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ರದ್ದು
ಬೆಂಗಳೂರು; ಅಜ್ಜಯ್ಯನ ದರ್ಶನದ ನಂತರ ದೆಹಲಿಗೆ ಹೋಗುತ್ತೇನೆ ಎಂದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿಯನ್ನು ರದ್ದು ಮಾಡಿದ್ದಾರೆ. ನೊಣವಿನಕರೆಯಿಂದ ವಾಪಸ್ ಬಂದ ಡಿ.ಕೆ.ಶಿವಕುಮಾರ್ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ವೈದ್ಯರನ್ನು ಮನೆಗೆ ಕರೆಸಿಕೊಂಡು ಚಿಕಿತ್ಸೆ ಪಡೆದಿದ್ದಾರೆ.
ಶಿವಕುಮಾರ್ ಅವರು ಹೊಟ್ಟೆ ನೋವಿನಿಂದ ಬಳಲುತ್ತಿದ್ದೇನೆ. ಹೀಗಾಗಿ ದೆಹಲಿಹೋಗುತ್ತಿಲ್ಲ. ನನ್ನನ್ನು ಬಿಟ್ಟುಬಿಡಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.