Bengaluru

ಎಬಿವಿಪಿ ಪ್ರತಿಭಟನೆ; ಲಾಠಿಚಾರ್ಜ್‌ಗೆ 20 ವಿದ್ಯಾರ್ಥಿಗಳಿಗೆ ಗಾಯ

ಬೆಂಗಳೂರು: ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿ  ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದು, ೨೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯವಾಗಿದೆ.

ಸರಿಯಾಗಿ ಮೌಲ್ಯಮಾಪನ ಮಾಡುತ್ತಿಲ್ಲ. ಜೊತೆಗೆ ಫಲಿತಾಂಶವನ್ನೂ ಕಾಲಕಾಲಕ್ಕೆ ನೀಡುತ್ತಿಲ್ಲ ಎಂದು ಆರೋಪಿಸಿ ನೂರಾರು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಲಾಕ್‌ಡೌನ್‌ ಆದಾಗಿನಿಂದ ಶೈಕ್ಷಣಿಕ ಸಮಸ್ಯೆಗಳು ಹೆಚ್ಚುತ್ತಿವೆ. ಇವುಗಳನ್ನು ವಗೆಹರಿಸದ ಕಾರಣ, ಮುಂದಿನ ವಿದ್ಯಾಭ್ಯಾಸಕ್ಕೆ ಕಷ್ಟವಾಗುತ್ತಿದೆ. ಈ ಕಾರಣದಿಂದಾಗಿ ಎಬಿವಿಪಿ ಪ್ರತಿಭಟನೆ ಮಾಡಲಾಗುತ್ತಿತ್ತು.

ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು, ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್‌ ನಡೆಸಿದರು. ಪ್ರತಿಭಟನೆಗೆ ನಿನ್ನೆಯೇ ಅನುಮತಿ ಪಡೆದಿದ್ದರೂ, ಪೊಲೀಸರು ಏಕಾಏಕಿ ಲಾಠಿ ಚಾರ್ಜ್‌ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

 

ಎಬಿವಿಪಿ ಪ್ರತಿಭಟನೆ
ಲಾಠಿಚಾರ್ಜ್‌
ಬೆಂಗಳೂರು ವಿವಿಯಲ್ಲಿ
ಪರೀಕ್ಷೆ ಮೌಲ್ಯಮಾಪನ ಹಾಗೂ ಫಲಿತಾಂಶ ನೀಡುವ ವಿಚಾರವಾಗಿ
ಶೈಕ್ಷಣಿಕ ಸಮಸ್ಯೆ ನಿವಾರಿಸಬೇಕೆಂದು ಆಗ್ತಹಿಸಿ

Share Post