27 ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ; ಶೋಧ
ಬೆಂಗಳೂರು: ಮಧ್ಯವರ್ತಿಗಳ ಮೂಲಕ ಅಕ್ರಮ ನಡೆಸುತ್ತಿರುವುದಲ್ಲದೆ, ಭ್ರಷ್ಟಾಚಾರ ಮಿತಿಮೀರಿರುವ ಆರೋಪದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಬಿಬಿಎಂಪಿಯ 27 ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ಎಫ್ಐಆರ್ ದಾಖಲಿಸಿಕೊಂಡಿರುವ ಎಸಿಬಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.
ಬೆಳಿಗ್ಗೆಯಿಂದ ಏಕಕಾಲಕ್ಕೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಪಾಲಿಕೆಯ ಕಂದಾಯ ವಿಭಾಗ, ಆಸ್ತಿ ಹಕ್ಕುಗಳ ವರ್ಗಾವಣೆ ವಿಭಾಗ, ಜಾಹೀರಾತು ವಿಭಾಗ, ನಗರ ಯೋಜನಾ ವಿಭಾಗ, ರಸ್ತೆ ಮತ್ತು ಮೂಲಸೌಕರ್ಯ ವಿಭಾಗ ಸೇರಿದಂತೆ ವಿವಿಧ ವಿಭಾಗಗಳ ಕಚೇರಿಗಳಲ್ಲಿ ತಪಾಸಣೆ ನಡೆಸಲಾಗಿದೆ. ಎಸಿಬಿಯ 200ಕ್ಕೂ ಹೆಚ್ಚು ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.